ಲಖನೌ, ಮಾ. 01(DaijiworldNews/HR): ಉತ್ತರಪ್ರದೇಶದ ಆಲಿಘರ್ನ ಗ್ರಾಮವೊಂದರ ಬಳಿಯಿರುವ ಅರಣ್ಯ ಪ್ರದೇಶದಲ್ಲಿ ದಲಿತ ಬಾಲಕಿಯ ಶವ ಪತ್ತೆಯಾಗಿದ್ದು, ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಸಾಂಧರ್ಭಿಕ ಚಿತ್ರ
"ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ, ಜೊತೆಗೆ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ" ಎಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ಸಂಜೆಯ ವೇಳೆಗೆ ಬಾಲಕಿಯು ಹಸುವಿಗೆ ಮೇವು ತರಲು ಹತ್ತಿರವಿದ್ದ ಅರಣ್ಯ ಪ್ರದೇಶಕ್ಕೆ ಹೋಗಿದ್ದ ಆಕೆ ಮನೆಗೆ ಹಿಂದಿರುಗದ ಕಾರಣ ಕುಟುಂಬಸ್ಥರು ಬಾಲಕಿಯ ಹುಡುಕಾಟ ನಡೆಸುವಾಗ ಆಕೆಯ ಶವ ಗ್ರಾಮದಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿದೆ" ಎಂದು ವರದಿಯಾಗಿದೆ.
ಇನ್ನು "ಬಾಲಕಿಯ ಶವ ಪತ್ತೆಯಾಗಿದ್ದಾಗ ಆಕೆಯ ಬಟ್ಟೆಗಳು ಹರಿದಿದ್ದು, ಅವಳ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಾಕ್ಷಿಗಳು ಹೇಳಿವೆ. ಪ್ರಾಥಮಿಕ ವರದಿಯಲ್ಲಿ ಬಾಲಕಿಯನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಐದು ತಂಡಗಳನ್ನು ರಚಿಸಲಾಗಿದೆ' ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.