ಬೆಂಗಳೂರು, ಮಾ. 01 (DaijiworldNews/SM): ಕೊರೋನಾ ಕಾರಣದಿಂದಾಗಿ ಪ್ರಸ್ತುತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬದಲಾಗಿದ್ದು, ಜೂನ್ 21 ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆಸಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಅವರು ಪ್ರಕಟಿಸಿದ್ದಾರೆ. ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಅಲ್ಲದೆ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಜೂನ್ 21- ಪ್ರಥಮ ಭಾಷೆಯ ಪರೀಕ್ಷೆಗಳು ನಡೆಯಲಿದೆ.(ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಜೂ.24-ಗಣಿತ,
ಜೂ. 28-ವಿಜ್ಞಾನ,
ಜೂ. 30-ತೃತೀಯ ಭಾಷಾ ಪರೀಕ್ಷೆಗಳು
ಜುಲೈ2- ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ,
ಜು.5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.