ಬೆಂಗಳೂರು, ಮಾ.02 (DaijiworldNews/HR): ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋವೊಂದು ಬಹಿರಂಗವಾಗಿದ್ದು, ಪೊಲೀಸ್ ಆಯುಕ್ತರಿಗೆ ಸಿಡಿ ಸಲ್ಲಿಸಿ ದೂರು ನೀಡಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ ಎನ್ನಲಾಗಿದೆ.
ಯುವತಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆಕೆಯನ್ನು ಸೆಕ್ಸ್ ಗೆ ಬಳಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ದಿನೇಶ್ ಕಲ್ಲಹಳ್ಳಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
ವಿಡಿಯೋದಲ್ಲಿರುವ ಯುವತಿಗೆ ಬೆದರಿಕೆ ಹಾಕಲಾಗಿದ್ದು, ಆಕೆಯ ಕುಟುಂಬದವರಿಗೂ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.
ಇನ್ನು ಈ ಕುರಿತು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದೆ ಎನ್ನಲಾಗಿದೆ.