ಬೆಂಗಳೂರು, ಮಾ. 02 (DaijiworldNews/SM): ಯುವತಿಯೊಬ್ಬಳ ಜೊತೆಗೆ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗುತ್ತಿದ್ದಂತೆ, ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದ್ದು, ಸಂತ್ರಸ್ತೆಯ ಕುಟುಂಬವನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಪ್ರತಿಕ್ರಿಯೆ ನೀಡಿದ್ದಾರೆ.
ಸಂತ್ರಸ್ತೆ ಹಾಗೂ ಅವರ ಕುಟುಂಬದವನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಈಗಾಗಲೇ ಸಚಿವರ ವಿರುದ್ಧ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ. ಇನ್ನು ಸಚಿವರು ಮಹಿಳೆಗೆ ಬೆದರಿಕೆಯೊಡ್ಡಿದ್ದಾರೆ. ಹಾಗೂ ಆ ಬಗ್ಗೆ ಸಂತ್ರಸ್ತೆ ಹಾಗೂ ಕುಟುಂಬಸ್ಥರು ತನಗೆ ತಿಳಿಸಿರುವುದಾಗಿ ದೂರುದಾರ ದಿನೇಶ್ ಹೇಳಿದ್ದಾರೆ. ಅವರಿಂದ ಮತ್ತಷ್ಟು ಮಾಹಿತಿ ಪಡೆಯಲಾಗುವುದಾಗಿ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ಅಲ್ಲದೆ, ಸಂತ್ರಸ್ತೆ ಹಾಗೂ ಕುಟುಂಬದವರನ್ನು ನಾವೇ ಸಂಪರ್ಕಿಸುತ್ತೇವೆ. ಹಾಗೂ ಹೇಳಿಕೆ ಪಡೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.