ಬೆಂಗಳೂರು, ಮಾ.03 (DaijiworldNews/PY): "ಮಾನ-ಮರ್ಯಾದೆ ಇದ್ದರೆ ಮೊದಲು ರಾಜೀನಾಮೆ ನೀಡಿ" ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಡೀ ದೇಶಕ್ಕೆ ರಮೇಶ್ ರಾಸಲೀಲೆ ಗೊತ್ತಾಗಿದೆ. ಈ ಪ್ರಕರಣದ ಬಗ್ಗೆ ಶೀಘ್ರವೇ ಎಫ್ಐಆರ್ ದಾಖಲಿಸಬೇಕು. ಸೂಕ್ತವಾದ ತನಿಖೆ ನಡೆಸಬೇಕು" ಎಂದಿದ್ದಾರೆ.
"ಮನುಷ್ಯ ಮೌಲ್ಯಗಳಿಗೆ ಬೆಲೆ ಕೊಡಬೇಕು ಎನ್ನುವುದಾದರೆ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಬೇಕು" ಎಂದು ತಿಳಿಸಿದ್ದಾರೆ.
ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೋರ್ವಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪದ ಮೇಲೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ದ ಮಾ.2 ಮಂಗಳವಾರದಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ.