ನವದೆಹಲಿ, ಮಾ.03 (DaijiworldNews/MB) : ''ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಮಾತ್ರಕ್ಕೆ ಅದು ದೇಶದ್ರೋಹವಾಗಲಾರದು'' ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಸಂವಿಧಾನದ 370 ನೇ ವಿಧಿ ರದ್ದತಿ ಬಗ್ಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ವಿರುದ್ದ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ವಜಾಗೊಳಿಸಿದೆ.
370ನೇ ವಿಧಿ ಯ ಬಗ್ಗೆ ಭಾರತವನ್ನು ಟೀಕೆ ಮಾಡಲೆಂದು ಅಬ್ದುಲ್ಲಾ ಅವರು ಚೀನಾ ಮತ್ತು ಪಾಕಿಸ್ತಾನದ ಸಹಾಯವನ್ನು ಪಡೆದಿದ್ದಾರೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿದ್ದು ಈ ಅರ್ಜಿಯನ್ನು ವಜಾಗೊಳಿಸಿದ ಸರ್ವೋಚ್ಛ ನ್ಯಾಯಾಲಯ ಅರ್ಜಿದಾರರಿಗೆ 50,000 ರೂಪಾಯಿ ದಂಡ ವನ್ನು ವಿಧಿಸಿದೆ.