ಮುಂಬೈ, ಮಾ.03 (DaijiworldNews/MB) : ಪೊಲೀಸರು ಬಾಲಕಿಯರ ಬಟ್ಟೆ ಬಿಚ್ಚಿಸಿ ನಗ್ನವಾಗಿಸಿ ಬಲವಂತವಾಗಿ ನೃತ್ಯ ಮಾಡಿಸಿದ ಆಘಾತಕಾರಿ ಘಟನೆ ಜಲಗಾಂವ್ನ ಹಾಸ್ಟೆಲ್ ಒಂದರಲ್ಲಿ ನಡೆದಿದೆ.
ಈ ವಿಚಾರವನ್ನು ವಿಪಕ್ಷವು ಬುಧವಾರ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಕೂಡಲೇ ಮಹಾರಾಷ್ಟ್ರ ಸರ್ಕಾರ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿ, ತನಿಖೆಗೆ ಘೋಷಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ''ಇದೊಂದು ಅತ್ಯಂತ ದುರದೃಷ್ಟಕರ ಘಟನೆಯಾಗಿದ್ದು ಈಬಗ್ಗೆ ತನಿಖೆಗೆ ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಿ ಎರಡು ದಿನದಲ್ಲಿ ವರದಿ ನೀಡಲು ತಿಳಿಸಲಾಗಿದೆ. ವರದಿಯ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು'' ಎಂದು ತಿಳಿಸಿದ್ದಾರೆ.
ಹಾಸ್ಟೆಲ್ನಲ್ಲಿದ್ದ ಕೆಲವು ಹುಡುಗಿಯರ ತನಿಖೆ ನಡೆಸಲಿದೆ ಎಂದು ಹೇಳಿದ ಪೊಲೀಸರು ಹಾಸ್ಟೆಲ್ನ ಬಾಲಕಿಯರ ಬಟ್ಟೆ ಬಿಚ್ಚಿಸಿ ಕುಣಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಘಟನೆಯ ವಿಡಿಯೋ ಕೂಡಾ ವೈರಲ್ ಆಗುತ್ತಿದೆ.