ಬೆಂಗಳೂರು, ಮಾ. 03 (DaijiworldNews/SM): ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೈತಿಕ ಹೊಣೆ ಹೊತ್ತು ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾಗಿದ್ದ ರಮೇಶ್ ಜಾರಕಿಹೊಳಿಯವರು ರಾಜಿನಾಮೆ ನೀಡಬೇಕೆಂಬ ಪಕ್ಷದಿಂದಲೇ ಕೇಳಿಬಂದ ಹಿನ್ನೆಲೆ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸದೆ ನೈತಿಇಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ತಮ್ಮ ಸಹೋದರ ಬಾಲಚಂದ್ರ ಜಾರಕಿಹೊಳಿ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು. ತಕ್ಷಣವೇ ರಾಜೀನಾಮೆ ಅಂಗೀಕಾರ ಮಾಡುವಂತೆ ಸಿಎಂ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.