ಲಕ್ನೋ, ಮಾ.04 (DaijiworldNews/PY): ವ್ಯಕ್ತಿಯೋರ್ವರು ತನ್ನ 17 ವರ್ಷದ ಮಗಳ ರುಂಡವನ್ನು ಕತ್ತರಿಸಿ ಹತ್ಯೆ ಮಾಡಿದ್ದು, ರುಂಡದೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ಘಟನೆ ಉತ್ತರಪ್ರದೇಶದ ಹರ್ದೋಯಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಪಾಂಡೇತರ ಗ್ರಾಮದ ಸವೇಶ್ ಕುಮಾರ್ ಎಂಬವರು ತಮ್ಮ ಮಗಳ ರುಂಡ ಕಡಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದು, ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
"ಮಗಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಈ ಕಾರಣದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳ ರುಂಡವನ್ನು ಕತ್ತರಿಸಿ ಹತ್ಯೆ ಮಾಡಿದ್ದೇನೆ. ದೇಹ ಮನೆಯಲ್ಲಿ ಬಿದ್ದಿದೆ ಎಂದು ಆರೋಪಿ ತಪ್ಪನ್ನುಒಪ್ಪಿಕೊಂಡಿದ್ದಾನೆ" ಎಂದು ಪೊಲೀಸರು ಹೇಳಿದ್ದಾರೆ.
2019ರಲ್ಲಿ ಅತಿ ಹೆಚ್ಚು ಪ್ರಕರಣ ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಇದೆ ಎಂದು 2020ರ ಸೆಪ್ಟೆಂಬರ್ನಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಅಂಕಿ ಅಂಶವನ್ನು ಬಿಡುಗಡೆ ಮಾಡಿತ್ತು.
ಈವರೆಗೆ ಯುಪಿಯಲ್ಲಿ ಪೋಕ್ಸೋ ಕಾಯ್ದೆಯಡಿ 7,444 ಪ್ರಕರಣ ದಾಖಲಾಗಿದ್ದರೆ, ಮಧ್ಯಪ್ರದೇಶದಲ್ಲಿ 6,053 ಹಾಗೂ ಮಹಾರಾಷ್ಟ್ರದಲ್ಲಿ 6,402 ಪ್ರಕರಣಗಳು ದಾಖಲಾಗಿವೆ.