ಬೆಂಗಳೂರು, ಮಾ.04 (DaijiworldNews/HR): ಅಶ್ಲೀಲ ಸಿ.ಡಿ. ಪ್ರಸಾರವಾರ ಬಳಿಕ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋವನ್ನು ತಡೆ ಹಿಡಿಯುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಸಿ.ಡಿ. ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಹಾಗೂ ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಇನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನು ಕೂಡ ಮೂವರು ಪ್ರಭಾವಿಗಳ ವಿಡಿಯೋ ಇದೆ ಎಂದು ಹೇಳಿದ್ದು, ಭಾರೀ ಸಂಚಲನ ಮೂಡಿಸಿದೆ ಎನ್ನಲಾಗಿದೆ.