ನವದೆಹಲಿ, ಮಾ.04 (DaijiworldNews/HR): ಸ್ಫೋಟಕ ಸಿಡಿದು ಜಾರ್ಖಂಡ್ ಜಗೌರ್ ರಾಜ್ಯ ಪೊಲೀಸ್ ಪಡೆಯ ಇಬ್ಬರು ಪೊಲೀಸರು ಹುತಾತ್ಮರಾಗಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ ರಾಜ್ಯದ ಪೂರ್ವ ಸಿಂಗುಭುಮ್ ಜಿಲ್ಲೆಯ ಹೊಯಹಟು ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಗುರುವಾರ ಬೆಳಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಹುತಾತ್ಮರಾಗಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಸಿಆರ್ಪಿಎಫ್ ಜವಾನ ಕೂಡ ಗಾಯಗೊಂಡಿದ್ದಾರೆ ಎಂದು ಸಿಆರ್ ಪಿಎಫ್ ವಕ್ತಾರರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.