ಬೆಂಗಳೂರು, ಮಾ.04 (DaijiworldNews/HR): ವಿಧಾನಸಭೆಯ 9ನೇ ಅಧಿವೇಶನದಲ್ಲಿ "ಒಂದು ದೇಶ ಒಂದು ಚುನಾವಣೆ" ಚರ್ಚೆ ಆರಂಭವಾಗಿದ್ದು, ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದ್ದಾರೆ ಎನ್ನಲಾಗಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, "ಚರ್ಚೆಗೆ ಒಪ್ಪಿಕೊಂಡು ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಾದ ಕ್ರಮ ಅಲ್ಲ" ಎಂದು ಹೇಳಿದ್ದಾರೆ.
ಇನ್ನು "ಒಂದು ದೇಶ ಒಂದು ಚುನಾವಣೆ ಯೋಚನೆಯೇ ಅವಾಸ್ತವಿಕ" ಎಂದು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು,. ಕಾಂಗ್ರೆಸ್ನ ಘೋಷಣೆಯ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಧರಣಿ ಮುಂದುವರಿದಿದ್ದರಿಂದ ಕಲಾಪವನ್ನು ಸಭಾಧ್ಯಕ್ಷ ಕಾಗೇರಿ 15 ನಿಮಿಷ ಮುಂದೂಡಿದ್ದಾರೆ.
ಇನ್ನು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಂಪನಿ ಸ್ಥಾಪನೆ, ಆಯುಷ್ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ಹಾಗೂ ಔಷಧ ನಿಯಂತ್ರಣ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಇನ್ನು ಅನೇಕ ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.