ಬೆಂಗಳೂರು, ಮಾ.04 (DaijiworldNews/PY): ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ತುಳಸಿ ಮುನಿರಾಜ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವುದರ ಮೊದಲು ವಿಧಾನಸೌಧದ ಪಶ್ಚಿಮ ದ್ವಾರಕ್ಕೆ ನಮಸ್ಕರಿಸಿದ ತುಳಸಿ ಮುನಿರಾಜ್ ಅವರು ಬಳಿಕ ವಿಧಾನಸೌಧಕ್ಕೆ ಭೇಟಿ ನೀಡಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, "ಮುನಿರಾಜು ಅವರು ತಳಮಟ್ಟದ ಕಾರ್ಯಕರ್ತ. ಅವರು ಯುವ ಮೋರ್ಚಾದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದವರು ಹಾಲಿ ರಾಜ್ಯ ಕಾರ್ಯದರ್ಶಿಗಳಾಗಿದ್ದಾರೆ. ಇದೀಗ ಪಕ್ಷ ಅವರನ್ನು ಗುರುತಿಸಿ ಸರ್ವಸಮ್ಮತದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ" ಎಂದು ಹೇಳಿದರು.