ಬೆಂಗಳೂರು, ಮಾ.04 (DaijiworldNews/HR): ಒಂದು ದೇಶ ಒಂದು ಚುನಾವಣೆ' ಕುರಿತು ವಿಧಾನ ಪರಿಷತ್ನಲ್ಲಿ ಚರ್ಚೆ ನಡೆಸಬಾರದು ಎಂದು ವಿರೋಧ ಪಕ್ಷ ಕಾಂಗ್ರೆಸ್ ಧರಣಿ ಆರಂಭಿಸಿದ ಹಿನ್ನಲೆಯಲ್ಲಿ ಸಭಾಪತಿ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ.
"ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಚರ್ಚಿಸದೇ ವಿಷಯವನ್ನು ಚರ್ಚೆಗೆ ತರಲಾಗಿದ್ದು, ಚುನಾವಣಾ ಪದ್ಧತಿಯ ಬದಲಾವಣೆ ಆಗಬೇಕಾದರೆ ಸಂವಿಧಾನದ ತಿದ್ದುಪಡಿ ಅಗತ್ಯ. ಅಂತಹ ಅಧಿಕಾರ ವಿಧಾನ ಪರಿಷತ್ ಗೆ ಇಲ್ಲ. ಹಾಗಾಗಿ ಚರ್ಚೆಗೆ ಅವಕಾಶ ನೀಡಬಾರದು" ಎಂದು ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಆಗ್ರಹಿಸಿದ್ದಾರೆ.
ಇನ್ನು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಶುಕ್ರವಾರ ಕಲಾಪ ಸಲಹಾ ಸಮಿತಿ ಸಭೆ ನಿಗದಿಯಾಗಿದ್ದು, ದಿನದ ಮಟ್ಟಿಗೆ ಚರ್ಚೆ ನಡೆಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ.