ಹೊಸದಿಲ್ಲಿ, ಮಾ.04 (DaijiworldNews/HR): ಹೊಸ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ಧ್ವನಿ ಎತ್ತುವ ಜನರನ್ನು ಗುರಿಮಾಡ್ವುದಕ್ಕಾಗಿ ನರೇಂದ್ರ ಮೋದಿ ಸರಕಾರವು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕೇಂದ್ರ ಸರಕಾರವು ಆದಾಯ ತೆರಿಗೆ ಇಲಾಖೆಯನ್ನು ತಮಗೆ ಬೇಕಾದಂತೆ ಕುಣಿಸುತ್ತಿದ್ದು, ರೈತರನ್ನು ಬೆಂಬಲಿಸುತ್ತಿರುವ ಜನರ ಮೇಲೆ ಕೇಂದ್ರ ಹಾಗೂ ಅದರ ನಿಯಂತ್ರಣದಲ್ಲಿರುವ ಸಂಸ್ಥೆಗಳು ಗುರಿ ಮಾಡುತ್ತಿವೆ" ಎಂದರು.
ಇನ್ನು ಬಾಲಿವುಡ್ ನಟಿ ತಾಪ್ಸಿ ಪೊನ್ನು ಹಾಗೂ ಚಿತ್ರ ನಿರ್ಮಾಪಕರಾದ ಅನುರಾಗ್ ಕಶ್ಯಪ್, ವಿಕ್ರಮಾದಿತ್ಯ ಮೋಟ್ವಾನ್, ವಿಕಾಸ್ ಬಾಲ್ ಹಾಗೂ ಮಧು ಮಂಟೆನಾಗೆ ಸೇರಿರುವ ಮನೆಗಳಿಗೆ ತೆರಿಗೆ ವಂಚಿಸಿದ ಆರೋಪದಲ್ಲಿ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದ್ದು, ರಾಹುಲ್ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.