ಠಾಣೆ, ಮಾ.05 (DaijiworldNews/HR): ವಿದ್ಯುತ್ ಮಗ್ಗ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಭಿವಂಡಿ ಪಟ್ಟಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು.
ಸಾಂಧರ್ಭಿಕ ಚಿತ್ರ
"ಬೆಳಿಗ್ಗೆ 2.20ರ ಸುಮಾರಿಗೆ ನೈಗಾಂವ್ ರಸ್ತೆಯಲ್ಲಿರುವ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ" ಎಂದು ವಿಪತ್ತು ನಿರ್ವಹಣಾ ಇಲಾಖೆಯ(ಆರ್ಡಿಎಂಸಿ) ಪ್ರಾದೇಶಿಕ ಮುಖ್ಯಸ್ಥ ಸಂತೋಷ್ ಖದಂ ತಿಳಿಸಿದ್ದಾರೆ.
ಇನ್ನು ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಸತತ ಎರಡು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ.