ನವದೆಹಲಿ, ಮಾ.06 (DaijiworldNews/HR): "ಇನ್ಮುಂದೆ ಎಲ್ಲಾ ಹೊಸ ಕಾರುಗಳಲ್ಲಿ ಎರಡೆರಡು ಏರ್ ಬ್ಯಾಗ್ಗಳನ್ನು ಕಡ್ಡಾಯವಾಗಿ ಹೊಂದಿರಬೇಕು" ಎಂದು ಕೇಂದ್ರ ಸರ್ಕಾರ ಹೇಳಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಟ್ವೀಟರ್ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, "ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ನಿಯಮವನ್ನು ಘೋಷಣೆ ಮಾಡಿದ್ದು, ಅದರಂತೆ ಇನ್ಮುಂದೆ ಎಲ್ಲಾ ಹೊಸ ಕಾರುಗಳಲ್ಲಿ ಏಪ್ರಿಲ್ 1ರಿಂದ ಡ್ಯುಯಲ್ ಫ್ರಂಟ್ ಏರ್ಬ್ಯಾಗ್ಗಳನ್ನು ಕಡ್ಡಾಯವಾಗಿ ಹೊಂದಿರಬೇಕು" ಎಂದು ತಿಳಿಸಿದೆ.
ಇನ್ನು "ರಸ್ತೆ ಸುರಕ್ಷತಾ ಮಾನದಂಡಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಮಿತಿಯ ಸಲಹೆಗಳನ್ನು ಆಧರಿಸಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ" ಎಂಬುದಾಗಿ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ ಎನ್ನಲಾಗಿದೆ.
ಕಾರಿನ ಮುಂಭಾಗದಲ್ಲಿ ಕುಳಿತವರಿಗೆ ಅಪಘಾತ ನಡೆಯುವ ಸಂಧರ್ಭದಲ್ಲಿ ತಲೆಗೆ ಪೆಟ್ಟಾಗಿ ಸಾಯುವ ಸಂಭವ ಹೆಚ್ಚಾಗಿದ್ದು, ಇಂತಹ ಸಂದರ್ಭಗಳಲ್ಲಿ ಕಾರಿನಲ್ಲಿ ಅಳವಡಿಸಲಾಗುವ ಏರ್ ಬ್ಯಾಗ್ ಗಳು ಅಪಘಾತದ ಸಂದರ್ಭದಲ್ಲಿ ತಲೆಗೆ ಆಗುವ ಸಂಭಾವ್ಯ ಪೆಟ್ಟನ್ನು ಬಹುತೇಕ ತಡೆಯುವುದರಿಂದ ಈ ನಿಯಮವನ್ನು ಜಾರಿಗೆ ತರಲಾಗಿದೆ.