ನವದೆಹಲಿ, ಮಾ.06 (DaijiworldNews/MB): ತೃಣಮೂಲ ಕಾಂಗ್ರೆಸ್ನ ಮಾಜಿ ಸಂಸದ, ಮಾಜಿ ಕೇಂದ್ರ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದಿನೇಶ್ ತ್ರಿವೇದಿ ಅವರು ಫೆಬ್ರವರಿ 12ರಂದು ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತಾನು ಬಿಜೆಪಿಗೆ ಸೇರ್ಪಡೆಯಾಗವುದಾಗಿ ಹೇಳಿದ್ದರು.
ಮಾರ್ಚ್ 6 ರ ಶನಿವಾರದಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ನವದೆಹಲಿಯಲ್ಲಿ ಅಧಿಕೃತವಾಗಿ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.
ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನೇಶ್ ತ್ರಿವೇದಿ ಅವರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳಿದ್ದರು. ''ಪ್ರಸ್ತುತ ಕೇಂದ್ರ ಸರ್ಕಾರ ಉತ್ತಮ ನಾಯಕತ್ವದಡಿಯಲ್ಲಿದೆ, ವಿಶ್ವವೇ ಗುರುತಿಸುವಂತಾಗಿದೆ'' ಎಂದು ಅಭಿಪ್ರಾಯಿಸಿದ್ದರು.