ನವದೆಹಲಿ, ಮಾ.06 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ದೇಶದ ಗಡಿಯಲ್ಲಿ ರೈತರ ಮಕ್ಕಳು ಪ್ರಾಣವನ್ನೇ ಪಣಕ್ಕಿಟ್ಟು ಗಡಿ ಕಾಯುತ್ತಿದ್ದಾರೆ, ಅತ್ತ ದೆಹಲಿ ಗಡಿಯಲ್ಲಿ ಮೊಳೆಯನ್ನು ಹಾಕಲಾಗಿದೆ. ಅನ್ನದಾತರು ತಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದಾರೆ, ಆದರೆ ಸರ್ಕಾರವು ಅವರ ಮೇಲೆ ದೌರ್ಜನ್ಯವನ್ನು ಎಸಗುತ್ತಿದೆ" ಎಂದರು.
ಇನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನವೆಂಬರ್ 26ರಿಂದ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರದಂದು ದೆಹಲಿ ಹೊರವಲಯದಲ್ಲಿ ಹೆದ್ದಾರಿಯಲ್ಲಿ ಐದು ತಾಸುಗಳ ರಸ್ತೆ ತಡೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.