ಬೆಂಗಳೂರು, ಮಾ.06 (DaijiworldNews/HR): "ನೈತಿಕ ಹೊಣೆ ಹೊತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜೀನಾಮೆ ನೀಡಬೇಕು" ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಡಿದ ಅವರು, "ಚಿನ್ನ ಸ್ಮಗಲಿಂಗ್ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಮೇಲೆ ನೇರ ಆರೋಪ ಬಂದಿದ್ದು, ಈ ಪ್ರಕರಣದ ಪ್ರಮುಖ ಆರೋಪಿಯೇ ಸಿಎಂ ವಿಜಯನ್ ಹೆಸರು ಹೇಳಿದ್ದಾರೆ, ಹಾಗಾಗಿ ಪಿಣರಾಯಿ ವಿಜಯನ್ ತಮ್ಮ ಹುದ್ದೆಯಿಂದ ಕೆಳಗಿಳಿಯುವುದು ಸೂಕ್ತ" ಎಂದರು.
ಇನ್ನು ಕೇರಳದ ಬಹುಕೋಟಿ ಚಿನ್ನದ ಸ್ಮಗಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕ್ಲೀನ್ ಚಿಟ್ ಸಿಕ್ಕಿತ್ತು. ಆದರೆ, ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಧಾನಸಭೆ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಮತ್ತು ರಾಜ್ಯದ ಇತರೆ ಮೂವರು ಸಚಿವರು ಭಾಗಿಯಾಗಿದ್ದಾರೆ ಎಂದು ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಹೇಳಿಕೆ ನೀಡಿದ್ದಾರೆ.