ಭೋಪಾಲ್, ಮಾ 06 (DaijiworldNews/MS): ಉಸಿರಾಟದ ಏರುಪೇರು ಕಂಡುಬಂದು ಅನಾರೋಗ್ಯಕ್ಕೀಡಾಗಿರುವ ಭೋಪಾಲ್ ನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಶನಿವಾರ ಏರ್ ಲಿಫ್ಟ್ ಮಾಡಲಾಗಿದೆ.
ಸಂಸದೆ ಪ್ರಗ್ಯಾ ಅವರನ್ನು ಮುಂಬೈನ ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಸದರ ಕಚೇರಿ ತಿಳಿಸಿದೆ. ಒಂದು ತಿಂಗಳೊಳಗೆ ಇದು ಎರಡನೇ ಬಾರಿಗೆ ಅನಾರೋಗ್ಯಕ್ಕೆ ಒಳಗಾಗಿ ಸಂಸದೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಫೆಬ್ರವರಿ 19 ರಂದು, ಅವರು ನವದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದರು.
ಇದಕ್ಕೂ ಮೊದಲು, ಎರಡು ತಿಂಗಳ ಹಿಂದೆಯಷ್ಟೇ ಕೋವಿಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪ್ರಗ್ಯಾ ಸಿಂಗ್ ಠಾಕೂರ್ ಏಮ್ಸ್ಗೆ ದಾಖಲಾಗಿ, ಡಿಸ್ಚಾರ್ಚ್ ಆಗಿದ್ದರು