ಬೆಂಗಳೂರು, ಮಾ.06 (DaijiworldNews/MB): "ಬೆಂಗಳೂರು ಮತ್ತು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಲ್ಲಿ ಕೊರೊನಾವೈರಸ್ ಭಯ ಹೆಚ್ಚುತ್ತಿದೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದರು. ಈ ಸಂಬಂಧ ಮುಂದಿನ ಎರಡು ತಿಂಗಳು ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಜನರು ಯಾವುದೇ ನಿರ್ಲಕ್ಷ್ಯ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
''ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಮಾತ್ರ ದಿನಕ್ಕೆ 400 ಪ್ರಕರಣಗಳು ದಾಖಲಾಗುತ್ತಿವೆ. ನಗರದಲ್ಲಿ 12 ಕೊರೊನಾ ಕ್ಲಸ್ಟರ್ಗಳನ್ನು ಗುರುತಿಸಲಾಗಿದೆ. 40 ಸಾವಿರ ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ'' ಎಂದು ವಿವರಿಸಿದರು.
''ಮುಂದಿನ ಎರಡು ತಿಂಗಳು ಗುಂಪು ಸೇರುವುದನ್ನು ತಪ್ಪಿಸಬೇಕು. ಬೆಂಗಳೂರು, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಉಡುಪಿ, ಕೊಡಗು, ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ'' ಎಂದು ತಿಳಿಸಿದರು.