ಮಾಲೂರು, ಮಾ.07 (DaijiworldNews/MB): ಪ್ರೀತಿಸಿದ ಯುವತಿಗೆ ಕರೆ ಮಾಡಿದಾಗ ಆಕೆ ಸ್ವೀಕರಿಸಿಲ್ಲವೆಂದು ಯುವಕನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರ ಪಟ್ಟಣ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಯುವಕ ಹೊಸಕೋಟೆ ತಾಲೂಕಿನ ಕೊರಟಿ ಗ್ರಾಮದ 34 ವರ್ಷ ವಯಸ್ಸಿನ ಮನೋಜ್ ಕುಮಾರ್.
ಮನೋಜ್ ಕುಮಾರ್ ತಾಲೂಕಿನ ಶಿವಾರಪಟ್ಟಣ ಗ್ರಾಮದ ಸಮೀಪ ಇರುವ ಕೆರೆಯಲ್ಲಿ ನಿರ್ಮಾಣವಾಗಿರುವ ಕೆಸಿ ವ್ಯಾಲಿಯಲ್ಲಿ ಕೆಲಸ ಮಾಡುತ್ತಿದ್ದು ಗುರುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದವನು ಎಂದಿನಂತೆ ತನ್ನ ಪ್ರಿಯತಮೆಗೆ ಕರೆ ಮಾಡಿದ್ದಾನೆ. ಆದರೆ ಆಕೆ ರಿಸೀವ್ ಮಾಡಿರಲಿಲ್ಲ. ಇದರಿಂದಾಗಿ ಮನನೊಂದ ಮನೋಜ್ ಕುಮಾರ್ ಶುಕ್ರವಾರ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಮಾಲೂರು ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821