ಬಾಗಲಕೋಟೆ, ಮಾ.07 (DaijiworldNews/HR): ನನಗೆ 66 ವರ್ಷ ವಯಸ್ಸಾಗಿದ್ದು, ಇದೇ ನನ್ನ ಕೊನೆ ಚುನಾವಣೆ, ಹೀಗಾಗಿ ನನಗೆ ಅವಕಾಶ ನೀಡಿ ಎಂದು ಬಿಜೆಪಿ ಪಕ್ಷದ ವರಿಷ್ಠರಿಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ನಾನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಇಚ್ಚಿಸುತ್ತಿದ್ದು, ಟಿಕೆಟ್ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು, ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಟಿಕೆಟ್ ಸಿಗುವ ಭರವಸೆ ಇದೆ" ಎಂದು ಹೇಳಿದರು.
ಇನ್ನು ನನಗೆ ಈಗಾಗಲೇ 66 ವರ್ಷ ವಯಸ್ಸಾಗಿದ್ದು, ಇದೇ ನನ್ನ ಕೊನೆ ಚುನಾವಣೆ, ಹೀಗಾಗಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ, ಟಿಕೆಟ್ ವಿಚಾರವಾಗಿ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇನ್ನೂ ಮೂರು ವರ್ಷದ ಅವದಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಅಭಿವೃದ್ಧಿ ,ಹಿಂದುತ್ವದ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.