ಕೋಲ್ಕತಾ, ಮಾ.07 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಪಶ್ಚಿಮಬಂಗಾಳಕ್ಕೆ ತೆರಳುತ್ತಿದ್ದಾರೆ. ಇದೇ ವೇಳೆ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಬೆಲೆ ಏರಿಕೆ ವಿರುದ್ದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುತ್ತಿರುವ ಮೊದಲ ರ್ಯಾಲಿ ಇದಾಗಿದೆ. ರ್ಯಾಲಿಯನ್ನು ಕೋಲ್ಕತ್ತಾದ ಮೈದಾನ್ ಪ್ರದೇಶದ ಬ್ರಿಗೇಡ್ ಪರೇಡ್ ಗ್ರೌಂಡ್ಸ್ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ರ್ಯಾಲಿಯಲ್ಲಿ ಅನೇಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.
ಎಲ್ಪಿಜಿ ಬೆಲೆ ಏರಿಕೆ ವಿರುದ್ದ ಸಿಲಿಗಿರಿಯಲ್ಲಿ ಮಮತಾ ಬ್ಯಾನರ್ಜಿ ಅವರು ಬೃಹತ್ ರ್ಯಾಲಿ ನಡೆಸಲು ಮುಂದಾಗಿದ್ದು, ಇದರಲ್ಲಿ ಹೆಚ್ಚಿ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ.
"ಇಂಧನ ಬೆಲೆ ಇಳಿಕೆ ಮಾಡದಿದ್ದಲ್ಲಿ ಬೃಹತ್ ಪ್ರತಿಭಟನೆಯನ್ನು ಪ್ರಾರಂಭಿಲಿದ್ದೇವೆ" ಎಂದು ಕಳೆದ ತಿಂಗಳು ಮಮತಾ ಬ್ಯಾನರ್ಜಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದರು.
"ಜನಸಾಮಾನ್ಯರು ಎಲ್ಪಿಜಿ ದರ ಏರಿಕೆಯಿಂದ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಬೆಲೆ ಏರಿಕೆಯನ್ನು ವಿರೋಧಿಸುವ ಉದ್ದೇಶದಿಂದ ರ್ಯಾಲಿಯಲ್ಲಿ ಖಾಲಿ ಸಿಲಿಂಡರ್ಗಳನ್ನು ಪ್ರದರ್ಶನ ಮಾಡಲಾಗುವುದು" ಎಂದು ತಿಳಿಸಿದ್ದಾರೆ.