ಮೈಸೂರು,ಮಾ.07 (DaijiworldNews/HR): "ಆಧುನಿಕ ಯುಗದ ಗ್ರಾಫಿಕ್ಸ್ಗೆ ಬಲಿಪಶು ಆಗುವ ಭಯ ನಮಗೆ ಕಾಡುತ್ತಿದ್ದು, ಇದು ಗ್ರಾಫಿಕ್ಸ್ ಯುಗ ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ" ಎಂದು ಸಚಿವ ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೃಶ್ಯ ಮಾಧ್ಯಮಗಳನ್ನು ತಿರುಚುವ ಧ್ವನಿ ನೀಡುವ ಕೆಲಸ ಆಗುತ್ತಿದ್ದು, ಗ್ರಾಫಿಕ್ ಮೂಲಕ ಕೈ ಕಾಲು ತಲೆ ಕತ್ತರಿಸಿದಂತೆ ಮಾಡಬಹುದು. ಸಿನಿಮಾದಿಂದ ಬಂರಿರುವುದರಿಂದ ನನಗೆ ಅದೆಲ್ಲಾ ಗೊತ್ತಿದೆ. ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ" ಎಂದರು.
ಇನ್ನು "ಸುಳ್ಳು ಬೇಗ ಹರಡುತ್ತದೆ, ಆದರೆ ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ ಮಾಧ್ಯಮದಲ್ಲಿ ಬಂದ ಕೂಡಲೇ ಅದನ್ನು ಜನ ನಂಬುತ್ತಾರೆ. ಆದರೆ ಸತ್ಯ ಹೊರಬರುವುದು ಪೊಲೀಸ್ ತನಿಖೆ ನ್ಯಾಯಲಯದ ಮೂಲಕ. ಅದಕ್ಕಾಗಿ ನಾವೆಲ್ಲಾ ಭಯಪಡುತ್ತಿದ್ದೇವೆ" ಎಂದು ಹೇಳಿದ್ದಾರೆ.