ಕೋಲ್ಕತ್ತಾ, ಮಾ.07 (DaijiworldNews/PY): ಬಾಲಿವುಡ್ನ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
12 ಗಂಟೆ ಸುಮಾರಿಗೆ ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನಕ್ಕೆ ಆಗಮಿಸಿದ ಮಿಥುನ್ ಚಕ್ರವರ್ತಿ ಅವರನ್ನು ಪಶ್ಚಿಮಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸ್ವಾಗತಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮೃಹತ್ ರ್ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಅವರು ಪಾಲ್ಗೊಳ್ಳಲಿದ್ದಾರೆ.
ಮಾ.6ರ ಶನಿವಾರದಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ ಅವರನ್ನು ಮಿಥುನ್ ಚಕ್ರವರ್ತಿ ಅವರು ಭೇಟಿಯಾಗಿದ್ದರು.
"ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುತ್ತಿರುವ ಮೊದಲ ರ್ಯಾಲಿ ಇದಾಗಿದೆ. ರ್ಯಾಲಿಯಲ್ಲಿ ಹತ್ತು ಲಕ್ಷ ಮಂದಿ ಸೇರಲಿದ್ದಾರೆ" ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.