ಕೋಲ್ಕತ್ತ, ಮಾ.07 (DaijiworldNews/HR): "ದೀದಿ ಮತ್ತು ಅವರ ಅನುಯಾಯಿಗಳಿಂದ ನಿಮ್ಮ ಕನಸುಗಳು ಚೂರುಚೂರಾಗಿದ್ದು, ಬೆಳವಣಿಗೆ ಕುಂಟಿತವಾಗಿದೆ, ಇಲ್ಲಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವಾಗಿದೆ" ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬಿಜೆಪಿಯ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿ ಮಾತನಾಡಿದ ಅವರು, "ಬಂಗಾಳಕ್ಕೆ ಶಾಂತಿ, ಸ್ವತಂತ್ರ ಮತ್ತು ಅಭಿವೃದ್ಧಿ ಬೇಕಿದ್ದು, 2047ರ ವೇಳಗೆ ಪಶ್ಚಿಮ ಬಂಗಾಳ ಮತ್ತೆ ದೇಶವನ್ನು ಮುನ್ನಡೆಸುವ ಬಂಗಾಳವಾಗಿ ಹೊರಹೊಮ್ಮಲಿದೆ" ಎಂದರು.
ಇನ್ನು ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ರ್ಯಾಲಿ ಇದಾಗಿದ್ದು, ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.