ಚಂಡೀಗಡ, ಮಾ.07 (DaijiworldNews/HR): ತನ್ನ ಪುಟ್ಟ ಕಂದಮನನ್ನು ಕಂಕುಳಲ್ಲಿ ಹೊತ್ತು ಮಹಿಳಾ ಪೊಲೀಸ್ ಪೇದೆಯೋರ್ವರು ಕರ್ತವ್ಯ ನಿಭಾಯಿಸಿದ ಘಟನೆ ಚಂಡೀಗಡದಲ್ಲಿ ನಡೆದಿದೆ.
ಪ್ರಿಯಾಂಕಾ ಎಂಬ ಟ್ರಾಫಿಕ್ ಪೊಲೀಸ್ ತನ್ನ ಪುಟ್ಟ ಮಗುವನ್ನು ಹೊತ್ತು, ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ವಾಹನ ಸವಾರನೋರ್ವ ಈ ವಿಡಿಯೋ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಪೇದೆಯ ಈ ಕಾರ್ಯಕ್ಕೆ ತೀವ್ರ ಮೆಚ್ಚುಗೆ ವ್ಯಕ್ತವಾಗಿದೆ.
ಇನ್ನು ಸಾಕಷ್ಟು ಜನರು ಟ್ವೀಟರ್ ಹಾಗೂ ಫೇಸ್ಬುಕ್ಗಳಲ್ಲಿ ಈ ವಿಡಿಯೋ ಹಂಚಿಕೊಳ್ಳುತ್ತಿದ್ದು, ಇದರೊಂದಿಗೆ ಪ್ರಿಯಾಂಕಾ ಅವರ ಮೇಲೆ ಕನಿಕರ ತೋರದ ಹಿರಿಯ ಅಧಿಕಾರಿಗಳ ವಿರುದ್ಧವೂ ನೆಟ್ಟಿಜನ್ ಆಕ್ರೋಶ ಹೊರಹಾಕಿದ್ದಾರೆ.
ಪ್ರಿಯಾಂಕಾ ಅವರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದ್ದು, ಅದರಂತೆ ಮಗು ಜತೆ 11 ಗಂಟೆಗೆ ಡ್ಯೂಟಿ ರಿಪೋರ್ಟ್ ಮಾಡಿಕೊಂಡಿದ್ದರು. ಮಗುವನ್ನು ಕರೆದುಕೊಂಡು ಬಂದಿದ್ದ ವಿಚಾರವಾಗಿ ಮೇಲಾಧಿಕಾರಿಗಳ ಜತೆಗೆ ವಾಗ್ವಾದ ನಡೆಸಿ, ಕರ್ತವ್ಯಕ್ಕೆ ಹಾಜರಾದರು ಎಂದು ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.