ಬೆಂಗಳೂರು, ಮಾ 08 (DaijiworldNews/MS): ಪ್ರಸ್ತುತ 2021-22ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. 8ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಸಹಜವಾಗಿಯೇ ನಿರೀಕ್ಷೆಗಳು ಹೆಚ್ಚಿವೆ.
ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿರುವ ಯಡಿಯೂರಪ್ಪ, ಕೊರೊನಾ ಸಂದರ್ಭದಲ್ಲಿ ಶ್ರಮಿಸಿದವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಕೊರೊನಾ ಸಾಂಕ್ರಮಿಕ ನಡುವೆಯೂ ಸರ್ಕಾರ ಕೆಲಸ ಮಾಡಿದೆ. ಆರೋಗ್ಯ, ಮೂಲಸೌಕರ್ಯಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ವೈದ್ಯರು, ಪೊಲೀಸರು, ಕಂದಾಯ, ನಗರಾಭಿವೃದ್ಧಿ ಸಿಬ್ಬಂದಿ ಕೊರೊನಾ ಸಂಕಷ್ಟದಲ್ಲಿ ಹಗಲಿರಳು ಕೆಲಸ ಮಾಡಿದ್ದಾರೆ. ಕೊರೊನಾ ಸಂಕಷ್ಟವನ್ನು ನಾವು ಒಂದು ಕ್ಷಣವೂ ಮರೆಯುವಂತಿಲ್ಲ. ಕೊರೊನಾ ಸಂಕಷ್ಟ ಒಂದು ದುಸ್ವಪ್ನ ಎಂದು ಯಡಿಯೂರಪ್ಪ ಕೊರೊನಾ ಸಂದರ್ಭವನ್ನು ಸ್ಮರಿಸಿಕೊಂಡಿದ್ದಾರೆ.
ಇದೇ ವೇಳೆ ಡಿವಿಜಿಯವರ ಮಂಕುತಿಮ್ಮನ ಕಗ್ಗವನ್ನು ಸಿಎಂ ಸ್ಮರಿಸಿದ್ದಾರೆ.