ಬೆಂಗಳೂರು, ಮಾ.08 (DaijiworldNews/HR): 2021-22ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ನಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ರೀತಿಯ ತೆರಿಗೆ ವಿಧಿಸದೇ ಇರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಎಚ್ಡಿ ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರದಲ್ಲಿ ಮತ್ತು ಕಳೆದ ವರ್ಷ ಯಡಿಯೂರಪ್ಪ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಮೇಲೆ 1 ರೂ. ಸೆಸ್ ವಿಧಿಸಿದ್ದು, ಸರ್ಕಾರಕ್ಕೆ ಆದಾಯ ತರುವ ಉದ್ದೇಶದಿಂದ ಸೆಸ್ ವಿಧಿಸುವುದು ಅನಿವಾರ್ಯ ಎಂದು ಸರ್ಕಾರಗಳು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿತ್ತು.
ಇನ್ನು ಜಿಎಸ್ಟಿ ಜಾರಿಯಾದ ನಂತರ ರಾಜ್ಯ ಸರ್ಕಾರಗಳಿಗೆ ಆದಾಯ ಕೊರತೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ತೈಲ ಇನ್ನೂ ಜಿಎಸ್ಟಿ ವ್ಯಾಪ್ತಿಗೆ ಸೇರದೇ ಇದ್ದ ಕಾರಣ ರಾಜ್ಯ ಸರ್ಕಾರಗಳು ಆದಾಯ ಹೆಚ್ಚಿಸುವ ದೃಷ್ಟಿಯಿಂದ ತೈಲಗಳ ಮೇಲೆ ಪ್ರತ್ಯೇಕ ಸೆಸ್ ವಿಧಿಸುತ್ತಿದ್ದವು ಎನ್ನಲಾಗಿದೆ.