ಬೆಂಗಳೂರು, ಮಾ.08 (DaijiworldNews/MB): ಪ್ರಸ್ತುತ 2021-22ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ನಲ್ಲಿ ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಪ್ರತ್ಯೇಕವಾಗಿ 200 ಕೋಟಿ ರೂಪಾಯಿಗಳನ್ನು ಘೋಷಿಸಲಾಗಿದೆ.
ಅಲ್ಪ ಸಂಖ್ಯಾತರ ಅಭಿವೃದ್ಧಿಗೆ 1,500 ಕೋಟಿ ರೂಪಾಯಿ ಮೀಸಲು ಇರಿಸಿದ್ದಾರೆ. ಹಾಗೆಯೇ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂಪಾಯಿಯನ್ನು ಸಿಎಂ ಘೋಷಿಸಿದ್ದಾರೆ.
ಇನ್ನು ಕ್ರೈಸ್ತ ಸಮುದಾಯಕ್ಕೆ ಈ ಬಾರಿ 200 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಾಗೂ ಕೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿಸೋಜಾ ಅವರಿಗೆ ಕ್ರೈಸ್ತ ಸಮುದಾಯದ ಮುಖಂಡರು ಧನ್ಯವಾದ ಸಲ್ಲಿಸಿದ್ದಾರೆ.