ಬೆಂಗಳೂರು, ಮಾ 08 (DaijiworldNews/MS): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸಭೆಯಲ್ಲಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ನ ಒಟ್ಟು ಗಾತ್ರ 2.43 ಕೋಟಿ ರೂ.ಗಳಾಗಿದೆ. ಕಳೆದ ವರ್ಷ 2,33,137 ಕೋಟಿ ರೂ. ಗಾತ್ರದ ಬಜೆಟ್ನ್ನು ಮಂಡಿಸಿದ್ದರು. ಈ ಬಾರಿ ಅದಕ್ಕೆ 10,600 ಕೋಟಿ ರೂ.ಗಳಷ್ಟು ಹೆಚ್ಚುವರಿ ಸೇರ್ಪಡೆಯಾಗಿದೆ.
ಅಡಿಕೆ ಹಳದಿ ರೋಗಕ್ಕೆ ಪರಿಹಾರಕ್ಕಾಗಿ ಪ್ರಯೋಗಾಲಯ ಸ್ಥಾಪನೆಯ ಬೇಡಿಕೆ ಹಲವಾರು ವರ್ಷಗಳಾಗಿದ್ದು ಕೊನೆಗೂ ಇದರ ಸಂಶೋಧನೆಗೆ ಅನುದಾನ ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ. ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗ ದ ಕುರಿತ ಸಂಶೋಧನೆ ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.
- ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪುನರ್ರಚನೆಗೆ ವಿಧೇಯಕ ತರಲು ಕ್ರಮ.
- ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮಾಡಲು 150 ಕೋಟಿ ರೂ.
- ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಲುಸಂಕ ಗಳನ್ನು ನಿರ್ಮಿಸುವ ಗ್ರಾಮ ಬಂಧ ಸೇತುವೆ ಯೋಜನೆ ಅನುಷ್ಠಾನ.
- ಮಂಗಳೂರು ಮತ್ತು ಪಣಜಿ ನಡುವೆ ಜಲಮಾರ್ಗಗಳ ಅಭಿವೃದ್ಧಿ ಕೇಂದ್ರ ಸರಕಾರದ ರಾಷ್ಟ್ರೀಯ ಜಲಮಾರ್ಗಗಳ ಪ್ರಾಧಿಕಾರದ ಸಹಾಯದೊಂದಿಗೆ ಒಟ್ಟು 60 ಕೋಟಿ ರೂ ವೆಚ್ಚದಲ್ಲಿ ರಾಜ್ಯದ ಐದು ಜಲಮಾರ್ಗಗಳ ಅಭಿವೃದ್ಧಿಗೆ ಕ್ರಮ .
- ಉಡುಪಿ ಜಿಲ್ಲೆಯ ತ್ರಾಸಿ ಮರವಂತೆ ಒತ್ತಿನಣೆ ಹಾಗೂ ಇತರ ಕಡಲತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ರಿಸಲು 10 ಕೋಟಿ ರೂ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ.
- ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಸೋಮೇಶ್ವರ ಕಡಲತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ.
- ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ 62 ಕೋಟಿ ರೂ. ಅನುದಾನ.
- ರಾಜ್ಯದಲ್ಲಿ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ತಾಂತ್ರಿಕ ಉನ್ನತೀಕರಣಕ್ಕೆ 2ಕೋಟಿ ಅನುದಾನ.
- ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಆರು ಕೋಟಿ ರೂ.ಗಳ ವೆಚ್ಚದಲ್ಲಿ ಮೀನು ಉತ್ಪನ್ನಗಳ ಸಂಸ್ಕರಣೆಗೆ ಆಧುನಿಕ ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಕೇಂದ್ರ ಸ್ಥಾಪನೆ.
- ರಾಜ್ಯಾದ್ಯಂತ 30 ಕೋಟಿ ರೂ.ಗಳ ವೆಚ್ಚದಲ್ಲಿ ಮೀನು ಮಾರಾಟ ಘಟಕ ಹಾಗೂ ಮತ್ಸ್ಯ ದರ್ಶಿನಿಗಳ ಸ್ಥಾಪನೆ.
ಮೀನು ಮತ್ತು sea weed ಗಳಿಂದ ಲಭ್ಯವಾಗುವ bioactive compoundsಗಳನ್ನು ಉಪಯೋಗಿಸಿ ಲಘು ಆಹಾರಗಳ ತಯಾರಿಕೆಯನ್ನು ಉತ್ತೇಜಿಸಲು ಮಂಗಳೂರಿನಲ್ಲಿ Advanced Biotech Innovation Center for Aqua-Marine ಸ್ಥಾಪನೆ