ಬೆಂಗಳೂರು, ಮಾ.08 (DaijiworldNews/HR): ಪ್ರಸ್ತುತ 2021-22ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಮಂಡನೆ ಮಾಡಿದ್ದು, ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದೆ.
ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ ಎಂದು ಅವರು ಬಜೆಟ್ ಮಂಡನೆಯ ವೇಳೆ ಘೋಷಿಸಿದರು.
ಇನ್ನು ಈ ಯಾತ್ರಿ ನಿವಾಸಕ್ಕಾಗಿ ಉತ್ತರ ಪ್ರದೇಶ ಸರ್ಕಾರವು 5 ಎಕರೆ ಪ್ರದೇಶವನ್ನು ಮಂಜೂರು ಮಾಡಲಿದೆ ಎಂದೂ ಯಡಿಯೂರಪ್ಪ ಇದೇ ವೇಳೆ ಹೇಳಿದ್ದಾರೆ.