ಬೆಂಗಳೂರು, ಮಾ.08 (DaijiworldNews/HR): ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಂದ್ರ ವಿಭಾಗದ ಡಿಸಿಪಿಗೆ ವಂದೇ ಮಾತರಂ ಸಮಾಜ ಸೇವಾ ಸಂಘಟನೆಯ ರಾಜ್ಯಾಧ್ಯಕ್ಷ ಸಿ.ಎಂ. ಶಿವಕುಮಾರ್ ನಾಯ್ಕ್ ಎಂಬುವವರು ದೂರು ದಾಖಲಿಸಿದ್ದಾರೆ.
ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಕುಮಾರಸ್ವಾಮಿಯವರು ಹೇಳಿದ್ದು, ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಮೂಲಕ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದು, ಯಾರೋ ಹೋರಾಟಗಾರರು ಡೀಲ್ ಮಾಡಿಕೊಂಡಿದ್ದಾರೆ ಎಂಬ ಸುಳ್ಳು ಸುದ್ದಿ ಬೇಡ. ಅದರ ಬದಲಿಗೆ ಕುಮಾರಸ್ವಾಮಿಯವರ ವಿಚಾರಣೆ ನಡೆಸಿ ಸತ್ಯವನ್ನ ಜನರ ಮುಂದಿಡಬೇಕು" ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.