ಬೆಂಗಳೂರು, ಮಾ.09 (DaijiworldNews/HR): ವಿಧಾನಸೌಧದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಗೆ ಹಾಜಾರಾಗದಿರಲು ಕಾಂಗ್ರೆಸ್ ನಿರ್ಧರಿಸಿದ್ದು, ಇಂದು ಸಭೆ ಹಾಜರಾಗಬೇಕಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಗೈರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಸೋಮವಾರ ಬಜೆಟ್ ಮಂಡನೆ ವೇಳೆ ಸದನದಿಂದ ಸಭಾತ್ಯಾಗ ಮಾಡಿದ್ದ ಕಾಂಗ್ರೆಸ್ ಇಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಲಾಪ ಸಲಹಾ ಸಮಿತಿ ಸಭೆಗೂ ಹಾಜರಾಗದೆ ಅಸಮಾಧಾನ ತೋರಿತು ಎನ್ನಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆಗೆ ಬಂದು ಹತ್ತು ನಿಮಿಷ ಕಾಲ ಸಿದ್ದರಾಮಯ್ಯ ಅವರಿಗೆ ಕಾದು ಕುಳಿತರು.
ಈ ಕುರಿತು ಮಾತನಾಡಿದ ಸಚಿವ ಬಸವರಾಜ್ ಬೊಮ್ಮಾಯಿ, "ಸಿದ್ದರಾಮಯ್ಯ ಹಿರಿಯರಿದ್ದಾರೆ, ಅನುಭವಿಗಳಿದ್ದಾರೆ. ರಾಜಕೀಯ ಕಾರಣಕ್ಕೋಸ್ಕರ ಸಭೆ ಬಹಿಷ್ಕಾರ ಮಾಡುವುದು ಸರಿಯಲ್ಲ. ಏನೇ ಇದ್ದರೂ ವಿಧಾನಸಭೆಯೊಳಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳೋಣ" ಎಂದರು.