ನವದೆಹಲಿ, ಮಾ.09 (DaijiworldNews/HR): ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಿಂದ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆಯು ಪ್ರಾರಂಭವಾಗಿದ್ದು, ಈ ಕುರಿತು ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ ಎನ್ನಲಾಗಿದೆ.
ಇನ್ನು ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆಯಲಿದ್ದು, ಅಸ್ಸಾಂನಲ್ಲಿ 3 ಹಂತಗಳಲ್ಲಿ ಮತದಾನ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುವುದು ಯಾಕೆ ಎಂದು ಅರ್ಜಿದಾರರು ಪ್ರಶ್ನಿಸಿದ್ದು, ನಾವು ನಿಮ್ಮ ಮಾತನು ಒಪ್ಪಲು ಸಾಧ್ಯವಿಲ್ಲ, ನಾವು ಇಡೀ ಪ್ರಕರಣವನ್ನು ನೋಡಿದ್ದು,ಈ ಅರ್ಜಿ ವಜಾಗೊಳಿಸಿದ್ದೇವೆ" ಎಂದು ಕೋರ್ಟ್ ಹೇಳಿದೆ.