ಬೆಂಗಳೂರು, ಮಾ.09 (DaijiworldNews/HR): 2018ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪನವರು ಮಂಗಳವಾರ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, "ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಂಸದರಾದ ಕೆ. ವಿರೂಪಾಕ್ಷಪ್ಪ ಅವರು ಇಂದು ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ" ಎಂದು ತಿಳಿಸಿದೆ.
ಇನ್ನು ವಿರೂಪಾಕ್ಷಪ್ಪ ಅವರು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದು, ಈ ವೇಳೆ ಕೆ.ಎಸ್.ಈಶ್ವರಪ್ಪ, ವಿಜಯೇಂದರ್ ಹಾಗೂ ಪಕ್ಷದ ಕೆಲ ಕಾರ್ಯಕರ್ತರು ಪಾಲ್ಗೊಂಡಿದ್ದರು ಎನ್ನಲಾಗಿದೆ.