ಚೆನ್ನೈ, ಮಾ.09 (DaijiworldNews/HR): ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯ ಮೊದಲು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯಾಗಿದ್ದು, ವಿಜಯಕಾಂತ್ ನೇತೃತ್ವದ ಡಿಎಂಡಿಕೆ ಪಕ್ಷವು ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡು ಮೈತ್ರಿಕೂಟದಿಂದ ಹೊರ ನಡೆದಿದೆ ಎಂದು ತಿಳಿದು ಬಂದಿದೆ.
"ಮೂರು ಸುತ್ತುಗಳ ಚರ್ಚೆಯ ಬಳಿಕ ಎಐಎಡಿಎಂಕೆಯು ನಾವು ನಿರೀಕ್ಷಿಸಿದ್ದಷ್ಟು ಸೀಟುಗಳನ್ನು ನೀಡಿಲ್ಲ" ಎಂದು ಡಿಎಂಡಿಕೆ ಪಕ್ಷ ತಿಳಿಸಿದೆ.
ಇನ್ನು ತಮಿಳುನಾಡಿನಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆಯು ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ.