ನವದೆಹಲಿ, ಮಾ.09 (DaijiworldNews/MB): ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಅವರ ವಿರುದ್ಧ 2019ರ ಲೋಕಸಭಾ ಚುನಾವಣಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಹೊರಡಿಸಲಾಗಿದ್ದು ಜಾಮೀನು ರಹಿತ ಬಂಧನದ ವಾರಂಟ್ನ್ನು ತಡೆಹಿಡಿಯಲು ಸುಪ್ರೀಂಕೋರ್ಟ್ ಮಂಗಳವಾರ ಆದೇಶಿಸಿದೆ.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಮಾತ್ರ ತಡೆಹಿಡಿಯಲು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್ ಅಬ್ದುಲ್ ನಜೀರ್ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು ಸೂಚಿಸಿದೆ.
2019ರ ಲೋಕಸಭಾ ಚುನಾವಣೆಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ತನ್ನ ವಿರುದ್ದ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಹಾಗೂ ಬಂಧನಕ್ಕೆ ಹೊರಡಿಸಲಾಗಿರುವ ವಾರಂಟ್ನ್ನು ತಡೆಹಿಡಿಯಲು ಪ್ರಸ್ತುತ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಡೆರ್ಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭಾರತಿ ಘೋಷ್ ಅವರು ಸೋಮುವಾರ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದು ಮಂಗಳವಾರ ವಾರಂಟ್ನ್ನು ತಡೆ ಹಿಡಿದಿದೆ.