ಬಲ್ಲಿಯಾ, ಮಾ.10 (DaijiworldNews/PY): ಉತ್ತರಪ್ರದೇಶದ ಬಲ್ಲಿಯಾ ನ್ಯಾಯಾಲಯವು, 2018ರಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶ ಶಿವಕುಮಾರ್ ಅವರು, ಆರೋಪಿ ರಾಹುಲ್ ಸಾಹ್ನಿ ಅವರನ್ನು ಶಿಕ್ಷೆಗೆ ಒಳಪಡಿಸಿದ್ದಾರೆ.
"2018ರ ಜುಲೈ 1ರಂದು ಚಿತ್ಬದ್ಗಾಂವ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯ ತಂದೆ, ಸಾಹ್ನಿ ಎಂಬಾತ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದರು" ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಪಿಂಗ್ ಟಾಡಾ ಹೇಳಿದ್ದಾರೆ.
ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ ನ್ಯಾಯಾಲಯವು ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ, ದೌರ್ಜನ್ಯ ತಡೆ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಲು ಆದೇಶ ನೀಡಿದೆ.