ಶಿಮ್ಲಾ, ಮಾ.10 (DaijiworldNews/PY): ಖಾಸಗಿ ಬಸ್ಸೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂಬಾದಿಂದ ಟೀಸಾಗೆ ಬರುತ್ತಿದ್ದ ಸಂದರ್ಭ ಖಾಸಗಿ ಬಸ್ ಸಮೀಪದ ಆಳವಾದ ಕಮರಿಗೆ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದ ಚಂಬಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಅರುಲ್ ಕುಮಾರ್ ಹೇಳಿದ್ದಾರೆ.
ಹಿರಿಯ ಪಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ.