ತಿರುವನಂತಪುರಂ, ಮಾ.10 (DaijiworldNews/PY): ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿ ಇರುವಾಗಲೇ ಕಾಂಗ್ರೆಸ್ಗೆ ಹಿನ್ನಡೆಯಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಪಿ.ಸಿ.ಚಾಕೋ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳಿರುವ ಪಿ.ಸಿ.ಚಾಕೋ ಅವರು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
"ಕಾಂಗ್ರೆಸ್ನಲ್ಲಿ ಎರಡು ಬಣಳ ನಡುವೆ ಗುಂಪುಗಾರಿಕೆಯಿದ್ದು, ಪಕ್ಷದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ" ಎಂದಿದ್ದಾರೆ.
"ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಆಯ್ಕೆ ಮಾಡುವ ಸಂದರ್ಭ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಜೊತೆ ಚರ್ಚಿಸಿಲ್ಲ" ಎಂದು ದೂರಿದ್ದಾರೆ.