ಚಂಡೀಗಢ: ಮಾ. 10 (DaijiworldNews/SM): ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರ ವಿಶ್ವಾಸ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದು, ಸರಕಾರ ಭದ್ರವಾಗಿದೆ.
ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರು ಅವರು ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದಿದ್ದಾರೆ. ಇದರಿಂದಾಗಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದ್ದು, ಮುಖಭಂಗ ಅನುಭವಿಸಿದಂತಾಗಿದೆ.
ಹರಿಯಾಣ ಸರ್ಕಾರವು 'ಜನರ ವಿಶ್ವಾಸವನ್ನು ಕಳೆದುಕೊಂಡಿದೆ' ಎಂದು ಆರೋಪಿಸಿ ಪ್ರತಿಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ಮತ್ತು ಇತರ 27 ಶಾಸಕರು ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದರು. ಅಲ್ಲದೆ, ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಈ ನಿರ್ಣಯವನ್ನು ಸ್ಪೀಕರ್ ಮತಕ್ಕೆ ಹಾಕಿದ್ದರು.
ಅವಿಶ್ವಾಸ ನಿರ್ಣಯದ ಪರವಾಗಿ 32 ಶಾಸಕರು ಹಾಗೂ ವಿರುದ್ಧವಾಗಿ 55 ಶಾಸಕ ಮತ ಚಲಾಯಿಸಿದ್ದಾರೆ. ಅಧಿಕಾರ ಉಳಿಸಿಕೊಳ್ಳಲು ಖಟ್ಟರ್ ಸರ್ಕಾರಕ್ಕೆ 45 ಮತಗಳ ಅಗತ್ಯ ಇತ್ತು. ಆದರೆ 55 ಮತ ಗಳಿಸುವ ಮೂಲಕ ವಿಶ್ವಾಸಮತ ಸಾಬೀತುಪಡಿಸಿದ್ದಾರೆ.