ಡೆಹ್ರಾಡೂನ್, ಮಾ. 10 (DaijiworldNews/SM): ಕಾಂಗ್ರೆಸ್ ಸರಕಾರ ವಿಶ್ವಾಸ ಕಳೆದುಕೊಂಡ ಬಳಿಕ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಉತ್ತರಾಖಂಡದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಸಂಸದ ತಿರತ್ ಸಿಂಗ್ ರಾವತ್ ಅವರು ಪ್ರಮಾಣವಚನ ಸ್ವೀಕರಿಸುವ ಮೂಲಕ ಬಿಜೆಪಿ ಸರಕಾರ ಬುಧವಾರದಂದು ಅಸ್ತಿತ್ವಕ್ಕೆ ಬಂದಂತಾಗಿದೆ.
ತ್ರಿವೇಂದ್ರ ಸಿಂಗ್ ರಾವತ್ ಅವರು ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ತಿರತ್ ಸಿಂಗ್ ರಾವತ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚಿಸುವ ಹಕ್ಕು ನೀಡುವಂತೆ ಮನವಿ ಮಾಡಿಕೊಂಡಿದ್ದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ 56 ವರ್ಷದ ತಿರತ್ ಸಿಂಗ್ ರಾವತ್ ಅವರಿಗೆ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ಅವರು ರಾಜಿನಾಮೆ ನೀಡಿದ್ದರು. ಬಳಿಕ ಸಾಕಷ್ಟು ಚರ್ಚೆಗಳ ನಂತರ ತಿರತ್ ಸಿಂಗ್ ರಾವತ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು.