ಬೆಂಗಳೂರು, ಮಾ.11 (DaijiworldNews/HR): ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಬುಧವಾರದಂದು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ ಎನ್ನಲಾಗಿದೆ.
ಇನ್ನು ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದ್ದು, ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಐದು ಮಂದಿ ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದು, ಸಾವಿಗೀಡಾದವರ ಒಟ್ಟು ಸಂಖ್ಯೆ 12,379ಕ್ಕೆ ತಲುಪಿದೆ.
ಇನ್ನು ಉಡುಪಿಯಲ್ಲಿ 33, ದಕ್ಷಿಣ ಕನ್ನಡ 25 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.