ಬೆಂಗಳೂರು, ಮಾ11 (DaijiworldNews/MS): ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಗುರುವಾರ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ
ಈ ಮಹತ್ವದ ಮಾತುಕತೆ ನಂತರ ಮಧು ಬಂಗಾರಪ್ಪ ಅವರು ತಮ್ಮ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕಲ್ಲಹಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದ ಅವರು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೊದಲು ಸೂಕ್ತ ರಾಜಕೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.
ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ .ಮಾತುಕತೆಯ ಬಳಿಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.