ನವದೆಹಲಿ, ಮಾ11 (DaijiworldNews/MS): ಪ್ರಧಾನಿ ನರೇಂದ್ರ ಮೋದಿಯವರ ಸುಮಾರು 100 ವರ್ಷದ ತಾಯಿ ಹೀರಾ ಬೆನ್ ಅವರು ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರು ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದು" ಕೊರೊನಾ ಲಸಿಕೆಯ ಮೊದಲ ಡೋಸ್ ನ್ನು ತಾಯಿ ಹೀರಾಬೆನ್ ಮೋದಿ ಪಡೆದುಕೊಂಡಿದ್ದಾರೆ ಎಂಬ ವಿಚಾರವನ್ನುಹಂಚಿಕೊಳ್ಳಲು ಸಂತೋಷವಾಗುತ್ತಿದೆ " ಎಂದು ಹೇಳಿದ್ದಾರೆ.
ಮಾತ್ರವಲ್ಲದೆ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿರುವ ನಿಮ್ಮ ಸುತ್ತಮುತ್ತಲಿನ ಜನರಿಗೆ ಪ್ರೇರೇಪಿಸಲು ಮತ್ತು ಸಹಾಯ ಮಾಡಲು ನಾನು ಎಲ್ಲರನ್ನು ಕೋರುತ್ತೇನೆ ”ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗಿದ್ದು ಇದರಂತೆ ಮಾ.1 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಮ್ಸ್ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡು, "ಅರ್ಹರಾದವರೆಲ್ಲಾ ಕೊರೊನಾ ಲಸಿಕೆ ಹಾಕಿಸಿ, 60 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹೆಸರು ನೋಂದಾಯಿಸಿಕೊಂಡು ಜಾಗತಿಕವಾಗಿ ಕೊರೊನಾದ ವಿರುದ್ದ ಹೋರಾಡೋಣ ಎಂದು ಕರೆ ನೀಡಿದ್ದರು.