ನಾಗ್ಪುರ, ಮಾ.11 (DaijiworldNews/HR): ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಾಗ್ಪುರದಲ್ಲಿ ಮಾರ್ಚ್ 15 ರಿಂದ 21 ರವರೆಗೆ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ನಿತಿನ್ ರಾವತ್ ಅವರು ಘೋಷಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಇಂದು ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದದಿಗಾರರೊಂದಿಗೆ ಮಾತನಾಡಿದ ಅವರು, "ಮಾರ್ಚ್ 15 ರಿಂದ 21 ರವರೆಗೆ ನಾಗ್ಪುರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗುವುದು" ಎಂದರು.
ಲಾಕ್ಡೌನ್ ಅವಧಿಯಲ್ಲಿ ಖಾಸಗಿ ಕಚೇರಿಗಳು ಬಂದ್ ಆಗಲಿದ್ದು, ಸರ್ಕಾರಿ ಕಚೇರಿಗಳು ಶೇಕಡಾ 25 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಿದ್ದಾರೆ.
ಇನ್ನು ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ತೆರೆಯಲಿದ್ದು, ಲಾಕ್ಡೌನ್ ಅವಧಿಯಲ್ಲಿ ಮಾತ್ರ ಮದ್ಯವನ್ನು ಆನ್ಲೈನ್ನಲ್ಲಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಜನರು ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು" ಎಂದು ಹೇಳಿದ್ದಾರೆ.