ಬೆಂಗಳೂರು, ಮಾ. 11 (DaijiworldNews/SM):ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ವಿಚಾರವಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ನಕಲಿ ಸಿಡಿ ತಯಾರಿಸಿದವರನ್ನು ಪತ್ತೆ ಹಚ್ಚಲು ತನಿಖಾ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಡಿ ಹಿಂದೆ ಷಡ್ಯಂತ್ರವಿದೆ. ನಕಲಿ ಸಿಡಿ ತಯಾರಿಸಲಾಗಿದೆ ಎಂದು ಹೇಳಿದ್ದು ರಮೇಶ್ ಜಾರಕಿಹೊಳಿ ಹೇಳಿದ್ದು, ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುವುದು ಎಂದರು.
ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಎಸ್ ಐಟಿ ತನಿಖೆ ಮಾಡಲಾಗುತ್ತಿದೆ. ವರದಿ ಸಲ್ಲಿಸಲು ಎಸ್ ಐಟಿಗೆ ಸಮಯ ನಿಗದಿ ಮಾಡಿಲ್ಲ. ಪ್ರಾಥಮಿಕ ತನಿಖೆ ನಂತರ ಎಫ್.ಐ.ಆರ್ ದಾಖಲಿಸಲಿದೆ ಎಂದು ಹೇಳಿದರು.
ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಪ್ರತ್ಯೇಕವಾಗಿ ದೂರು ನೀಡುವ ವಿಚಾರದಲ್ಲಿ ತಮ್ಮ ಬಳಿ ಮಾಹಿತಿ ಇಲ್ಲ. ಜಾರಕಿಹೊಳಿ ದೂರವಾಣಿ ಮೂಲಕ ತಮ್ಮೊಂದಿಗೆ ಮಾತನಾಡಿದ್ದಾರೆ. ತಾವು ನೀಡಿರುವ ಪತ್ರದ ಆಧಾರದ ಮೇಲೆ ತನಿಖೆ ಮಾಡಿ ಎಂದು ಹೇಳಿದ್ದಾರೆ. ಅದಕ್ಕಾಗಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.